ಬೆಂಗಳೂರು : ರಾಜ್ಯದ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ತಡೆಗೆ ರಾಜ್ಯ ಸರ್ಕಾರದಿಂದ 300 ಕೋಟಿ ಖರ್ಚು ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ರಾಜ್ಯದ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಲಾಗಿದೆ. ಅದನ್ನು ತಡೆಯಲು ಮುಂದಿನ ಎರಡು ವರ್ಷಗಳಲ್ಲಿ ₹300 ಕೋಟಿ ವ್ಯಯಿಸಲಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸಂತ್ರಸ್ತರಿಗೆ ತಲಾ ₹1.20 ಲಕ್ಷ, ಮನೆ ಹಾನಿಯಾಗಿದ್ದರೆ ₹50 ಸಾವಿರ ಪರಿಹಾರ
ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ ತಲಾ ₹1.20 ಲಕ್ಷ, ಭಾಗಶಃ ಹಾನಿಯಾಗಿದ್ದರೆ ₹50 ಸಾವಿರ ಪರಿಹಾರ ನೀಡಲಾಗುವುದು. ಪೂರ್ಣ ಮನೆ ನಾಶ ಆದವರಿಗೆ ಮನೆ ಕೂಡ ನಿರ್ಮಿಸಿ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಘಟಪ್ರಭಾ ನದಿ ಪ್ರವಾಹ ಬಾಧಿತ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿದ ಸಿಎಂ, ಪದೇ ಪದೇ ಪ್ರವಾಹಕ್ಕೆ ಸಿಲುಕುವ ಸಂತ್ರಸ್ತರು ಸ್ಥಳಾಂತರಕ್ಕೆ ಒಪ್ಪಿದರೆ, ಬೇರೆ ಕಡೆ ಮನೆ ಕಟ್ಟಿಸಿಕೊಡುತ್ತೇವೆ. ಇಲ್ಲದಿದ್ದರೆ ಮನೆ ಬಿದ್ದ ಜಾಗದಲ್ಲೇ ವಸತಿ ಯೋಜನೆಯಡಿ ಹೊಸ ಮನೆ ಕಟ್ಟಿಸಿಕೊಡುತ್ತೇವೆ ಎಂದು ತಿಳಿಸಿದ್ದಾರೆ. ಗೋಕಾಕ, ಚಿಕ್ಕೋಡಿ, ಕಾಗವಾಡ ತಾಲೂಕಿನ ಪ್ರವಾಹ ಪೀಡಿತ ಸ್ಥಳಗಳಿಗೂ ಭೇಟಿ ನೀಡಿದ್ದಾರೆ.