HomeKarnatakaBIG NEWS: ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ಮೋಸ: ಶಿವಮೊಗ್ಗದ ಬಿಜೆಪಿ ಮುಖಂಡ ಅರೆಸ್ಟ್

BIG NEWS: ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ಮೋಸ: ಶಿವಮೊಗ್ಗದ ಬಿಜೆಪಿ ಮುಖಂಡ ಅರೆಸ್ಟ್

ಶಿವಮೊಗ್ಗ: ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರೊಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಬಂಧಿತ ಆರೋಪಿ. ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದೂ ಅಲ್ಲದೇ 4 ಲಕ್ಷ ರೂಪಾಯಿ ಹಣ ಪಡೆದು ವಾಪಾಸ್ ಕೊಡದೇ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣಾದ ಪ್ರಮುಖನಾಗಿರುವ ಶರತ್ ಕಲ್ಯಾಣಿ ವಿರುದ್ಧ ಜುಲೈ 26ರಂದೇ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಶರತ್ ನಾಪತ್ತೆಯಾಗಿದ್ದ. ಇದೀಗ ಪೊಲೀಸರು ವಿಜಯಪುರ ಬಳಿ ಶರತ್ ಕಲ್ಯಾಣಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶರತ್ ಕಲ್ಯಾಣಿ ಅದಾಗಲೇ ಒಂದು ಮದುವೆಯಾಗಿದ್ದರೂ ತಾನು ಅವಿವಾಹಿತ ಎಂದು ಹೇಳಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 43 ವರ್ಷದ ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ. ಆಕೆಯನ್ನು ದೈಹಿಕವಾಗಿ ಬಳಸಿಕೊಂಡಿದ್ದು ಅಲ್ಲದೇ, ನಾಲ್ಕು ಲಕ್ಷ ಹಣವನ್ನೂ ದೋಚಿ ವಂಚಿಸಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular