HomeKarnatakaBIG NEWS: ಮುಡಾ ಹಗರಣ: ಮತ್ತೆ ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ ಅಬ್ರಾಹಂ

BIG NEWS: ಮುಡಾ ಹಗರಣ: ಮತ್ತೆ ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ ಅಬ್ರಾಹಂ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಇಂದು ಮತ್ತೆ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರುಇಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ವಾಪಾಸ್ ಪಡೆಯಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಈ ಬೆಳವಣಿಗೆ ನಡುವೆ ನಿನ್ನೆಯಷ್ಟೇ ಮುಡಾ ಕಚೇರಿಗೆ ಭೇಟಿ ನೀಡಿದ್ದ ಟಿ.ಜೆ.ಅಬ್ರಾಹಂ, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಹಂಚಲಾಗಿದ್ದ ನಿವೇಶನಗಳನ್ನು ವಾಪಾಸ್ ಪಡೆಯುವಂತೆ ಮನವಿ ಮಾಡಿದ್ದರು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದೆಹಲಿ ಪ್ರವಾಸದಿಂದ ಹಿಂತಿರುಗುತ್ತಿದ್ದಂತೆ ಟಿ.ಜೆ.ಅಬ್ರಾಹಂ ಮತ್ತೆ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

ರಾಜಭವನಕ್ಕೆ ತೆರಳಿರುವ ಟಿ.ಜೆ.ಅಬ್ರಾಹಂ ರಾಜ್ಯಪಾಲರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಟಿ.ಜೆ.ಅಬ್ರಾಹಂ ಮತ್ತೆ ರಾಜ್ಯಪಾಲರ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular