
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಒಂದು ಗಂಟೆವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ ನೀಡಲಾಗಿದೆ.
ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಬಾರ್, ರೆಸ್ಟೋರೆಂಟ್, ಹೋಟೆಲ್ ಸೇರಿದಂತೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.
ಸಿಎಲ್ 4, ಸಿಎಲ್ 6, ಸಿಎಲ್ 7, ಸಿಎಲ್ 70 ಲೈಸೆನ್ಸ್ ಪಡೆದ ಹೋಟೆಲ್, ಕ್ಲಬ್ ,ರೆಸ್ಟೋರೆಂಟ್ ಗಳು ಬೆಳಿಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ, ಸಿಎಲ್ 9 ಲೈಸೆನ್ಸ್ ಪಡೆದ ಬಾರ್ ಗಳು ಬೆಳಿಗ್ಗೆ 10 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಬಹುದು ಎನ್ನಲಾಗಿದೆ.