alex Certify ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆರೋಗ್ಯ ಸ್ಥಿರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆರೋಗ್ಯ ಸ್ಥಿರ

ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ(96) ಮತ್ತೆ ಅಸ್ವಸ್ಥರಾಗಿದ್ದು, ದೆಹಲಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ.

ಕಳೆದ ಜುಲೈ ಮೊದಲ ವಾರದಲ್ಲಿಯೂ ಅಡ್ವಾಣಿಯವರ ಆರೋಗ್ಯ ಹದಗೆಟ್ಟಿದ್ದು, ಈ ಸಂದರ್ಭದಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಅದಕ್ಕಿಂತ ಮೊದಲು ಏಮ್ಸ್ ನಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಮಂಗಳವಾರ ಮತ್ತೆ ತೀವ್ರ ಬಳಲಿಕೆ ಹಿನ್ನೆಲೆಯಲ್ಲಿ ಅವರನ್ನು ಇಂದ್ರಪ್ರಸ್ಥ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡಿದ್ದು, ನಿಗಾ ವಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...