HomeKarnatakaಬೇಡಿಕೆ ಈಡೇರಿಸಲಿದ್ದರೆ ಸೆ. 5 ರಿಂದ ಕೆಲಸ ಸ್ಥಗಿತಗೊಳಿಸಲು ಪಾಲಿಕೆಗಳ ನೌಕರರ ಸಂಘ ನಿರ್ಧಾರ

ಬೇಡಿಕೆ ಈಡೇರಿಸಲಿದ್ದರೆ ಸೆ. 5 ರಿಂದ ಕೆಲಸ ಸ್ಥಗಿತಗೊಳಿಸಲು ಪಾಲಿಕೆಗಳ ನೌಕರರ ಸಂಘ ನಿರ್ಧಾರ

ಬೆಂಗಳೂರು: 10 ಮಹಾನಗರ ಪಾಲಿಕೆಗಳ ನೌಕರರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಸೆಪ್ಟೆಂಬರ್ 5 ರಿಂದ ಕೆಲಸ ಸ್ಥಗಿತಗೊಳಿಸಲು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ನಿರ್ಧಾರ ಕೈಗೊಂಡಿದೆ.

ಸಂಘದ ಅಧ್ಯಕ್ಷ ಎ. ಅಮೃತ್ ರಾಜ್ ಈ ಬಗ್ಗೆ ಮಾಹಿತಿ ನೀಡಿದ್ದು, ಮಂಗಳವಾರ ನಡೆದ ಸಂಘದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬೇಡಿಕೆ ಈಡೇರಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಮಾಡಬೇಕು. ಪಾಲಿಕೆ ಅಧಿಕಾರಿ, ನೌಕರರಿಗೂ ಕೆಜಿಐಡಿ, ಜಿಪಿಎಫ್ ಸೌಲಭ್ಯ ಕಲ್ಪಿಸಬೇಕು. ಎರವಲು ಸೇವೆ ಅಧಿಕಾರಿ ಮತ್ತು ನೌಕರರನ್ನು ಮಾತೃ ಇಲಾಖೆಗೆ ಹಿಂತಿರುಗಿಸಿ ಖಾಲಿ ಇರುವ ಎಲ್ಲಾ ವೃಂದದ ಮುಂಬಡ್ತಿ ನೀಡಬೇಕು ಎಂದು ಒತ್ತಾಯಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟೆಂಬರ್ 4ರ ವರೆಗೆ ಗಡುವು ನೀಡಲಾಗಿದ್ದು, ಅಲ್ಲಿಯವರೆಗೆ ಬೇಡಿಕೆ ಈಡೇರಿಸದಿದ್ದಲ್ಲಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular