alex Certify ಬೆಳಗಾವಿ ಅಗ್ನಿ ದುರಂತದಲ್ಲಿ ಗಾಯಗೊಂಡ ಮೂವರು ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿ ಅಗ್ನಿ ದುರಂತದಲ್ಲಿ ಗಾಯಗೊಂಡ ಮೂವರು ಆಸ್ಪತ್ರೆಗೆ ದಾಖಲು

ಬೆಳಗಾವಿ: ಕೈಗಾರಿಕಾ ಪ್ರದೇಶದ ಇನ್ಸುಲೆನ್ ಟೇಪ್ ಉತ್ಪಾದನೆಯ ಸ್ನೇಹಂ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಯ ಲಿಫ್ಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಕಾರ್ಖಾನೆಗೆ ವ್ಯಾಪಿಸಿದೆ. ಕಾರ್ಖಾನೆಯ ಒಳಗೆ ಸಿಲುಕಿದ್ದ ಹಲವು ಕಾರ್ಮಿಕರನ್ನು ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಪೊಲೀಸರು, ಉಳಿದ ಕಾರ್ಮಿಕರು ರಕ್ಷಣೆ ಮಾಡಿದ್ದಾರೆ.

ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಡಿಸಿಪಿ ರೋಹನ್ ಜಗದೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ಮೂವರನ್ನು ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...