HomeKarnatakaಸಾರ್ವಜನಿಕರ ಗಮನಕ್ಕೆ : ಆ.16 ರಂದು ಜಿಲ್ಲಾ ಮಟ್ಟದ 'ಜನಸ್ಪಂದನ' ಕಾರ್ಯಕ್ರಮ

ಸಾರ್ವಜನಿಕರ ಗಮನಕ್ಕೆ : ಆ.16 ರಂದು ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ

ಬಳ್ಳಾರಿ : ಜಿಲ್ಲಾ ಮಟ್ಟದ “ಜನಸ್ಪಂದನ” ಕಾರ್ಯಕ್ರಮವನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ಆ.16 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಸರ್ಕಾರಿ ಕೆಲಸಕ್ಕೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳೇನಾದರು ಇದ್ದಲ್ಲಿ ಆ.16 ರಂದು ನಡೆಯುವ “ಜನಸ್ಪಂದನ” ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular