HomeKarnatakaಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಾಳೆಯಿಂದ ‘ಫ್ಲವರ್ ಶೋ’ ಆರಂಭ, ಟಿಕೆಟ್ ಬೆಲೆ ಎಷ್ಟು ತಿಳಿಯಿರಿ.!

ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಾಳೆಯಿಂದ ‘ಫ್ಲವರ್ ಶೋ’ ಆರಂಭ, ಟಿಕೆಟ್ ಬೆಲೆ ಎಷ್ಟು ತಿಳಿಯಿರಿ.!

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಆಗಸ್ಟ್ 8 ರಿಂದ 19ರ ವರೆಗೆ ನಡೆಯಲಿದೆ.

ಸ್ವಾತಂತ್ರೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 216ನೇ ಫಲಪುಷ್ಪ ಪ್ರದರ್ಶನ ಇದಾಗಿದೆ. 200 ಪ್ರಭೇದದ ಸುಮಾರು 30-32 ಲಕ್ಷ ಹೂಗಳನ್ನು ಪ್ರದರ್ಶನದಲ್ಲಿ ಬಳಕೆ ಮಾಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ. ಆಂಥೋರಿಯಂ ಹೂಗಳು, ಗುಲಾಬಿ, ಜರ್ಬೆರಾ, ಆರ್ಕಿಡ್, ನಂದಿ ಗಿರಿಧಾಮದ ಇಂಪೇಷನ್ಸ್ ಹೂಗಳು, ರೆಡ್ಹಾಟ್ ಪೋಕರ್, ಆಲ್ಸ್ಟೋಮೇರಿಯನ್ ಲಿಲ್ಲಿ, ಪೂಷಿಯಾ, ಅಗಪಾಂಥಸ್, ಸೈಕ್ಲೋಮನ್, ಕ್ಯಾಲಾಲಿಲ್ಲಿ, ಸುಗಂಧ ರಾಜ ಸೇರಿ ವಿವಿಧ ಹೂಗಳ ಪ್ರದರ್ಶನ ಮಾಡಲಾಗುತ್ತಿದೆ.

ಪ್ಲವರ್ ಶೋನಲ್ಲಿ ದೊಡ್ಡವರಿಗೆ 80 ರೂ ಟಿಕೆಟ್ ಇದ್ದು, ರಜಾ ದಿನಗಳಲ್ಲಿ 100 ರೂಪಾಯಿ ನಿಗದಿಮಾಡಲಾಗಿದೆ. ಇನ್ನು ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗಿದೆ., ಬೆಳ್ಳಗ್ಗೆ 9 ಗಂಟೆಯಿಂದ ರಾತ್ರಿ 6 ಗಂಟೆಯವರೆಗೂ ಪ್ಲವರ್ ಶೋ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದೆ. ಪ್ಲವರ್ ಶೋ ಗೆ ಬರುವವರಿಗೆ ಶಾಂತಿನಗರದ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು, ಟ್ರಾಫಿಕ್ ಉಂಟಾಗದಂತೆ ಮೆಟ್ರೋವನ್ನೇ ಬಳಸುವಂತೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular