HomeKarnatakaGOOD NEWS : ವಿಶ್ವಕರ್ಮ ಸಮುದಾಯಕ್ಕೆ ಗುಡ್ ನ್ಯೂಸ್ ; ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು...

GOOD NEWS : ವಿಶ್ವಕರ್ಮ ಸಮುದಾಯಕ್ಕೆ ಗುಡ್ ನ್ಯೂಸ್ ; ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ (ಹೊಸದು ಮತ್ತು ನವೀಕರಣ), ವಿದೇಶಿ ವ್ಯಾಸಂಗ ಯೋಜನೆ (ಹೊಸಬರು ಮತ್ತು ನವೀಕರಣ), ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗಳಡಿ ಸೌಲಭ್ಯ ಪಡೆಯಲು (ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಸವಿತಾ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಒಕ್ಕಲಿಗ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಹಿಂದುಳಿದ ವರ್ಗಗಳ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೆ ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಸ ಕಲ್ಪಿಸಲಾಗಿದೆ.

ಆಸಕ್ತರು ಸೇವಾಸಿಂಧು ಪೋರ್ಟಲ್‌ನ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ಮತ್ತು ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಂಶದ https://www.kaushalkar.com ರಲ್ಲಿ ದಾಖಲೆಗಳ ಸಹಿತ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ) ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kvcdcl.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular