HomeKarnatakaJOB ALERT : ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ |Home Guard jobs

JOB ALERT : ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ |Home Guard jobs

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿಯಿರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಒಟ್ಟು 189 ಸ್ಥಾನಗಳಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭಾರತೀಯ ಪ್ರಜೆಯಾಗಿದ್ದು, 19 ರಿಂದ 45 ವರ್ಷ ವಯೋಮಿತಿಯ, 10ನೇ ತರಗತಿ ಪಾಸಾಗಿರುವ, ವೈದ್ಯಕೀಯವಾಗಿ ಸಶಕ್ತರಾಗಿರುವ ಹಾಗೂ ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು/ಆರೋಪ ಅಥವಾ ಅಪರಾಧಿಯಾಗಿರದವರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಷನ್, 2ನೇ ಮಹಡಿ, ಗಾಂಧಿನಗರ ಮುಖ್ಯರಸ್ತೆ, ಶಿವಮೊಗ್ಗ, ಅಥವಾ ಜಿಲ್ಲೆಯ ಎಲ್ಲಾ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆ.12ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಗೌರವ ಸಮಾದೇಷ್ಠರಾದ ಡಾ. ಚೇತನ ಹೆಚ್.ಪಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295630 / 255630 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular