ವಿಜಯಪುರ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದಲ್ಲಿ ಶಾಲೆಯ ಸ್ಟಾಕ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮುಖ್ಯ ಶಿಕ್ಷಕನ ಶವ ಪತ್ತೆಯಾಗಿದೆ.
ನಾಗೂರು ಗ್ರಾಮದ ಮುಖ್ಯ ಶಿಕ್ಷಕ ಸಿ.ಎಸ್. ಹಡಪದ ಅವರ ಶವ ಪತ್ತೆಯಾಗಿದೆ. ಎರಡು ವರ್ಷದಿಂದ ನಾಗೂರು ಶಾಲೆಯಲ್ಲಿ ಸಿ.ಎಸ್. ಹಡಪದ ಅವರು ಸೇವೆ ಸಲ್ಲಿಸುತ್ತಿದ್ದು, ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.