alex Certify GOOD NEWS : ರಾಜ್ಯದ ಶಾಲೆ, ಕಾಲೇಜುಗಳಲ್ಲಿ ‘ಬೋಧಕ’ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ.. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯದ ಶಾಲೆ, ಕಾಲೇಜುಗಳಲ್ಲಿ ‘ಬೋಧಕ’ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ..

ಬೆಂಗಳೂರು : ದಿನಾಂಕ 1-1-2016 ರಿಂದ 31.12 2020 ರ ವರೆಗೆ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಇರುವ ಬೋಧಕ ಹುದ್ದೆಗಳನ್ನು ತುಂಬಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಕ್ರಮಾಂಕ (3), (4) ಮತ್ತು (5) ರನ್ವಯ ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ ದಿನಾಂಕ:31.12.2020 ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಖಾಲಿ ಇರುವ ಬೋಧಕ ಹುದ್ದೆಗಳನ್ನು ಆರ್ಥಿಕ ಮಿತವ್ಯಯ ಸಡಿಲಿಸಿ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ.

ಆದ್ದರಿಂದ 1994-95 ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ದಿನಾಂಕ:01.01.2016 ರಿಂದ ದಿನಾಂಕ:31.12.2020 ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತಿಗಳಿಗೊಳಪಟ್ಟು ಭರ್ತಿ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

ಷರತ್ತುಗಳು:
1. ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ: ಆಇ 384 ವೆಚ್ಚ-8/2013, ದಿನಾಂಕ: 09.04.2013 ರಲ್ಲಿನ ಚೆಕ್ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು.
2. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳವುದು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...