ಟಾಲಿವುಡ್ ನ ಮಾಸ್ ಮಹಾರಾಜ ರವಿತೇಜ ಅಭಿನಯದ ‘ಮಿಸ್ಟರ್ ಬಚ್ಚನ್’ ಚಿತ್ರದ ಟ್ರೈಲರನ್ನು ನಿನ್ನೆಯಷ್ಟೇ ಪೀಪಲ್ ಮೀಡಿಯಾ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈಗಾಗಲೇ ತನ್ನ ಹಾಡುಗಳಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಸಿನಿಮಾ ಇದೇ ಆಗಸ್ಟ್ 15ಕ್ಕೆ ತೆರೆ ಕಾಣಲಿದೆ.
ಹರೀಶ್ ಶಂಕರ್ ನಿರ್ದೇಶನದ ಈ ಚಿತ್ರದಲ್ಲಿ ರವಿತೇಜ, ಭಾಗ್ಯಶ್ರೀ ಬೋರ್ಸೆ ಮತ್ತು ಜಗಪತಿ ಬಾಬು ಪ್ರಮುಖ ಪಾತ್ರದಲ್ಲಿದ್ದು, ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ನಲ್ಲಿ ಟಿಜಿ ವಿಶ್ವ ಪ್ರಸಾದ್ ನಿರ್ಮಾಣ ಮಾಡಿದ್ದಾರೆ, ವಿವೇಕ್ ಕೂಚಿ ಭೋಟ್ಲ ಸಹ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. ಉಜ್ವಲ್ ಕುಲಕರ್ಣಿ ಸಂಕಲನ, ರಾಮ ಲಕ್ಷ್ಮಣ್ ಹಾಗೂ ಪೃಥ್ವಿ ಸಾಹಸ ನಿರ್ದೇಶನವಿದ್ದು,ಮಿಕ್ಕಿ ಮೇಯರ್ ಸಂಗೀತ ಸಂಯೋಜನೆ ನೀಡಿದ್ದಾರೆ.