HomeKarnatakaGOOD NEWS : ಇನ್ಮುಂದೆ ಮನೆ ಬಾಗಿಲಿಗೆ 'ಆರೋಗ್ಯ ಸೇವೆ' : ರಾಜ್ಯ ಸರ್ಕಾರದಿಂದ ಮತ್ತೊಂದು...

GOOD NEWS : ಇನ್ಮುಂದೆ ಮನೆ ಬಾಗಿಲಿಗೆ ‘ಆರೋಗ್ಯ ಸೇವೆ’ : ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಜಾರಿ.!

ಬೆಂಗಳೂರು : ಜನರಿಗೆ ಮನೆ ಬಾಗಿಲಲ್ಲಿಯೇ ತಪಾಸಣೆ ನಡೆಸಿ ಅಗತ್ಯ ಔಷಧಿಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತರಲಿದೆ.

ಹೌದು. ಮನೆ ಬಾಗಿಲಲ್ಲಿಯೇ ತಪಾಸಣೆ ನಡೆಸಿ, ಅಗತ್ಯ ಔಷಧಿಗಳನ್ನು ಒದಗಿಸುವ ಗೃಹ ಆರೋಗ್ಯ ಯೋಜನೆಯನ್ನು ಮುಂದಿನ ತಿಂಗಳು ರಾಜ್ಯದಲ್ಲಿ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿರುವವರಲ್ಲಿ ಕೆಲವರು ನಿಯಮಿತವಾಗಿ ಮಾತ್ರೆಗಳನ್ನು ಸೇವಿಸುತ್ತಿಲ್ಲ. ಆರ್ಥಿಕ ಹೊರೆ ಸೇರಿ ವಿವಿಧ ಕಾರಣಗಳಿಂದ ಮಾತ್ರೆಗಳನ್ನು ಖರೀದಿಸುತ್ತಿಲ್ಲ. ಗೃಹ ಆರೋಗ್ಯ ಯೋಜನೆಯಡಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಮನೆಗಳಿಗೆ ನೇರವಾಗಿ ಒದಗಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular