HomeKarnataka15 ಸಾವಿರಕ್ಕೂ ಅಧಿಕ ಜನರಿಗೆ ನಿವೇಶನ ಹಂಚಿಕೆಗೆ 120 ಎಕರೆ ಜಮೀನು ಅಭಿವೃದ್ಧಿ: ಡಿಸಿಎಂ ಡಿ.ಕೆ....

15 ಸಾವಿರಕ್ಕೂ ಅಧಿಕ ಜನರಿಗೆ ನಿವೇಶನ ಹಂಚಿಕೆಗೆ 120 ಎಕರೆ ಜಮೀನು ಅಭಿವೃದ್ಧಿ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಮನಗರ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಘೋಷಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜನರ ಮನೆ ಬಾಗಿಲಿಗೆ ಹೋಗಿದೆ. ನಿವೇಶನಕ್ಕಾಗಿ 15,000 ದಷ್ಟು ಅರ್ಜಿಗಳು ಬಂದಿವೆ. ಈಗಾಗಲೇ 120 ಎಕರೆ ಜಮೀನು ಗುರುತಿಸಿದ್ದೇವೆ. ಅಭಿವೃದ್ಧಿಗೆ 100 ಕೋಟಿ ಮಂಜೂರು ಮಾಡುವ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ನಿವೇಶನಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಸುಳ್ಳು, ನಿಜ ಎಲ್ಲವನ್ನು ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ಈಗಲೂ ನಿವೇಶನಕ್ಕೆ ಅರ್ಜಿ ಸಲ್ಲಿಸುವವರು ಸಲ್ಲಿಸಬಹುದು. ಕನಕಪುರ ವಾರ್ಡ್ ಗಳಲ್ಲಿ ಕುಳಿತು ಜಮೀನು ಹಂಚಿದ್ದೇವೆ. ಶಾಲೆ, ದೇವಸ್ಥಾನ ಇಟ್ಟುಕೊಂಡು ಹೊಸ ಪಟ್ಟಣ ಘೋಷಿಸುತ್ತೇವೆ. ಅಕ್ಕಪಕ್ಕದವರು ಜಮೀನು ಮಾರುವವರಿದ್ದರೆ ಒಳ್ಳೆಯ ಬೆಲೆಗೆ ಖರೀದಿಸುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular