ಮೈಸೂರು: ಮಾಜಿ ಸಿಎಂ ಯಡಿಯೂರಪ್ಪನವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ನಿವೃತ್ತಿ ಪಡೆಯುವಾಗ ಇನ್ನೊಬ್ಬರ ಬಗ್ಗೆ ಹೇಳುವುದು ಸ್ವಾಭಾವಿಕ. ಸಿದ್ದರಾಮಯ್ಯ ಈಗ ಮನಬಂದಂತೆ ಮಾತನಾಡುತಿದ್ದಾರೆ. ಮಾತನಾಡಲಿ ಎಂದರು.
ಭ್ರಷ್ಟ ಸರ್ಕಾರ ಕಿತ್ತೊಗೆಯಲು ಪಾದಯಾತ್ರೆ ಮಾಡುತ್ತಿದ್ದೇವೆ. ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ನಾಳೆ ಪಾದಯಾತ್ರೆ ಬೃಹತ್ ಸಮಾವೇಶ ನಡೆಯಲಿದೆ. ಸಿದ್ದರಾಮಯ್ಯ ನಿವೃತ್ತಿ ಪಡೆದು ಮನೆಗೆ ಹೋಗುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದರು.
ನನಗೆ ನಿವೃತ್ತಿ ಪಡೆಯಲು ಹೇಳಿದ್ದಾರೆ. ಯಾರು ನಿವೃತ್ತಿಯಾಗುತ್ತಾರೆ ಎಂಬುದು ಮುಂದೆ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.