HomeKarnatakaವೀರಶೈವ-ಲಿಂಗಾಯತ ಸಮುದಾಯಕ್ಕೆ ಗುಡ್ ನ್ಯೂಸ್ ; ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ವೀರಶೈವ-ಲಿಂಗಾಯತ ಸಮುದಾಯಕ್ಕೆ ಗುಡ್ ನ್ಯೂಸ್ ; ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25ನೇ ಸಾಲಿನಲ್ಲಿ ಬಸವ ಬೆಳಗು ಯೋಜನೆ (ಹೊಸತು), ವಿದೇಶ ವಿದ್ಯಾವಿಕಾಸ ಯೋಜನೆ (ಹೊಸತು, ನವೀಕರಣ), ಜೀವಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಯಂ ಉದ್ಯೋಗ ಸಾಲ ಯೋಜನೆಗೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ವೀರಶೈವ -ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಆಗಸ್ಟ್ 31 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ)

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ), ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್ , ಬಳ್ಳಾರಿ ಮೇನ್ ರೋಡ್, ಗಂಗಾನಗರ, ಬೆಂಗಳೂರು -32 ಅಥವಾ ನಿಗಮದ ವೆಬ್ ಸೈಟ್ https://kvldcl.karnataka.gov.in ನಲ್ಲಿ ಅಥವಾ ನಿಗಮದ ದೂರವಾಣಿ ಸಂಖ್ಯೆ 080-23539601 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular