ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭವು ಆಗಸ್ಟ್, 11 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೊಡಗು ಗೌಡ ಸಮಾಜದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರಾದ ಪೊನ್ನಚನ ಶ್ರೀನಿವಾಸ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಆರ್., ಉಪ ವಿಭಾಗಾಧಿಕಾರಿ ವಿನಾಯಕ ಕೆ.ನರ್ವಡೆ, ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಪಿ.ಸಿ., ಇತರರು ಪಾಲ್ಗೊಳ್ಳಲಿದ್ದಾರೆ.
ಕೊಡಗು ಗೌಡ ಸಮಾಜದ ಅಧ್ಯಕ್ಷರಾದ ಪೇರಿಯನ ಜಯಾನಂದ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಶ್ರೀನಿವಾಸ್, ರಾಜ್ಯ ಖಜಾಂಜಿ ಡಾ.ಎಸ್.ಸಿದ್ದರಾಮಣ್ಣ, ಗೌರವಾಧ್ಯಕ್ಷರಾದ ಬಿ.ಹೆಚ್.ವೆಂಕಟೇಶಯ್ಯ, ಕಾರ್ಯಾಧ್ಯಕ್ಷರಾದ ಬಿ.ಮಲ್ಲಿಕಾರ್ಜುನ ಹಿರಿಯ ಉಪಾಧ್ಯಕ್ಷರಾದ ಎಂ.ವಿ.ರುದ್ರಪ್ಪ, ಎಸ್.ಬಸವರಾಜು, ಆರ್.ಮೋಹನ್ ಕುಮಾರ್, ಕಾರ್ಯದರ್ಶಿ ಡಾ.ನೆಲ್ಕುದ್ರಿ ಸದಾನಂದ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಕೆ.ಬಿ.ರವಿ ಇತರರು ಪಾಲ್ಗೊಳ್ಳಲಿದ್ದಾರೆ.