alex Certify ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

2024-25ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,2ಬಿ,3ಬಿ ಮತ್ತು ಪ.ಜಾ/ಪ.ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1,ಎಸ್‌ಸಿ/ಎಸ್‌ಟಿಯವರಿಗೆ ರೂ. 2.50 ಲಕ್ಷ ಹಾಗೂ ಪ್ರವರ್ಗ-2ಎ,2ಬಿ,3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಗಳಿಗೆ ರೂ. 1.00 ಲಕ್ಷದೊಳಗಿರಬೇಕು.

ಆಸಕ್ತರು ವೆಬ್‌ಸೈಟ್ https://shp.karnataka.gov.in ರಲ್ಲಿ ಸೆ. 04 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://bcwd.karnataka.gov.in ಪಡೆಯುವುದು ಮತ್ತು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹಾಗೂ ಮೊ.ಸಂ.: 8050770005 / 08182-222129 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...