alex Certify ವಾಲ್ಮೀಕಿ ನಿಗಮ ಹಗರಣ: ಇಡಿ ವಶಕ್ಕೆ ಪ್ರಮುಖ ಆರೋಪಿ ಸತ್ಯನಾರಾಯಣ: ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಲ್ಮೀಕಿ ನಿಗಮ ಹಗರಣ: ಇಡಿ ವಶಕ್ಕೆ ಪ್ರಮುಖ ಆರೋಪಿ ಸತ್ಯನಾರಾಯಣ: ಹೈಕೋರ್ಟ್ ಆದೇಶ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯ ವಶಕ್ಕೆ ನೀಡುವಂತೆ ಎಸ್ಐಟಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಸತ್ಯನಾರಾಯಣ ವರ್ಮಾ ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿದೆ.

ಸತ್ಯನಾರಾಯಣ ಅವರ ಎಸ್ಐಟಿ ಕಸ್ಟಡಿ ಅವಧಿ ಆಗಸ್ಟ್ 12ರಂದು ಸಂಜೆ ಮುಕ್ತಾಯವಾಗಲಿದೆ, ಆ. 13 ರಿಂದ ಅವರನ್ನು ಇಡಿ ವಶಕ್ಕೆ ಒಪ್ಪಿಸುವ ಸಂಬಂಧ ತನಿಖಾಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕೆಂದು ಹೈಕೋರ್ಟ್ ಆದೇಶ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...