HomeKarnatakaBREAKING NEWS: ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ನಿವಾಸದಲ್ಲಿ ಬರೋಬ್ಬರಿ 1.2 ಕೋಟಿ ಹಣ ಜಪ್ತಿ ಮಾಡಿದ...

BREAKING NEWS: ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ನಿವಾಸದಲ್ಲಿ ಬರೋಬ್ಬರಿ 1.2 ಕೋಟಿ ಹಣ ಜಪ್ತಿ ಮಾಡಿದ ಇಡಿ

ಬೆಂಗಳೂರು: ಕೆಐಎಡಿಬಿ ಅಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ಇಡಿ-ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ಮನೆಯಿಂದ ಕೋಟ್ಯಂತರ ರೂಪಾಯಿ ನಗದು ಹಣ ಜಪ್ತಿ ಮಾಡಲಾಗಿದೆ.

ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ವಾಣಿ ಅವರ ಮನೆ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ವಾಣಿ ಅವರ ಬೆಂಗಳೂರಿನ ರಾಜರಾಜೇಶ್ವರಿ ನಗರ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಬರೋಬ್ಬರಿ 1.2 ಕೋಟಿ ಹಣ ಜಪ್ತಿ ಮಾಡಿದ್ದಾರೆ. ಅಲ್ಲದೇ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಆರ್.ಆರ್.ನಗರದಲ್ಲಿರುವ ಟೆಂಪೆಲ್ ಬೆಲ್ ಅಪಾರ್ಟ್ ಮೆಂಟ್ ನಲ್ಲಿ ವಾಣಿ ಅವರಿಗೆ ಸೇರಿದ ಫ್ಲಾಟ್ ನಲ್ಲಿ ಹಣ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular