ಚಿಕ್ಕಮಗಳೂರು: ಶೃಂಗೇರಿ ಶಾರದಾಂಬ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇದೀಗ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.
ಶಾರದಾಂಬಾ ದೇವಿ ಸನ್ನಿಧಾನದಲ್ಲಿ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಪ್ರಕಟಣೆ ಹೊರಡಿಸಲಾಗಿದೆ.
ಪುರುಷರು ಧೋತಿ, ಶಲ್ಯ ಹಾಗೂ ಮಹಿಳೆಯರು ಸೀರೆ, ರವಿಕೆ, ಸಲ್ವಾರ್, ದುಪ್ಪಟ್ಟ, ಲಂಗ -ದಾವಣಿಗಳಂತಹ ಸಾಂಪ್ರದಾಯಿಕ ಉಡುಗೆ ಧರಿಸಿ ದೇವರ ದರ್ಶನ ಪಡೆಯಬಹುದು. ಇದು ಆಗಸ್ಟ್ 15 ರಿಂದ ಕಡ್ಡಾಯವಾಗಿ ಜಾರಿಗೆ ಬರಲಿದೆ.