HomeKarnatakaದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದಾಗ ದುರಂತ: ಭೀಕರ ಅಪಘಾತದಲ್ಲಿ ತಾಯಿ ಸ್ಥಳದಲ್ಲೇ ದುರಮರಣ; ಮಗಳ ಸ್ಥಿತಿ ಗಂಭೀರ

ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದಾಗ ದುರಂತ: ಭೀಕರ ಅಪಘಾತದಲ್ಲಿ ತಾಯಿ ಸ್ಥಳದಲ್ಲೇ ದುರಮರಣ; ಮಗಳ ಸ್ಥಿತಿ ಗಂಭೀರ

ರಾಯಚೂರು: ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದ ತಾಯಿ ಹಾಗೂ ಮಗಳಿಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗಳ ಸ್ಥಿತಿ ಗಂಭೀರವಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ನಾಗಲಾಪೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ

ಭಾಗ್ಯಮ್ಮ (35) ಮೃತ ಮಹಿಳೆ. ಭಾಗ್ಯಮ್ಮ ಅವರ ಮಗಳು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾಳೆ.

ಭಾಗ್ಯಮ್ಮ ಹಾಗೂ ಮಗಳು ಬೆಳಿಗ್ಗೆ ಛತ್ತರದ ಹನುಮಾನ್ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದರು. ಈ ವೇಳೆ ವೇಗವಾಗಿ ಬಂದ ಟಾಟಾ ಏಸ್ ವಾಹನ ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಭಾಗ್ಯಮ್ಮ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular