HomeIndiaBREAKING: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ

BREAKING: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಅನಂತನಾಗ್ ಜಿಲ್ಲೆಯ ಕೊಕೆರ್ನಾಗ್ ಬಳಿ ಎನ್ ಕೌಂಟರ್ ನಡೆದಿದೆ.

ಇಬ್ಬರು ಯೋಧರು ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ.

ಅನಂತನಾಗ್‌ ನಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಹ್ಲಾನ್ ಪ್ರದೇಶದ ಅರಣ್ಯದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ ನಡೆದಿದೆ. ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ. ಅಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸರ್ಚ್ ಕಾರ್ಯಾಚರಣೆ ಆರಂಭಿಸಿವೆ. ಶೋಧನಾ ದಳದ ಸಿಬ್ಬಂದಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಎನ್‌ಕೌಂಟರ್ ನಡೆಯಿತು, ಅವರು ಪ್ರತಿದಾಳಿ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular