HomeIndiaಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ; ಏರ್ ಇಂಡಿಯಾ ಪ್ರಯಾಣಿಕನ ಬಂಧನ

ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ; ಏರ್ ಇಂಡಿಯಾ ಪ್ರಯಾಣಿಕನ ಬಂಧನ

ಕೊಚ್ಚಿ: ವಿಮಾನ ನಿಲ್ದಾಣದಲ್ಲಿ ಬ್ಯಾಗ್ ತಪಾಸಣೆ ವೇಳೆ ನನ್ನ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕನೊಬ್ಬ ಬೆದರಿಕೆ ಹಾಕಿದ್ದು, ತಕ್ಷಣ ಆತನನ್ನು ಬಂಧಿಸಿರುವ ಘಟನೆ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಮನೋಜ್ ಕುಮಾರ್ (42) ಬಂಧಿತ ವ್ಯಕ್ತಿ. ಈತ ಕೊಚ್ಚಿನ್ ಏರ್ ಪೋರ್ಟ್ ನಿಂದ ಏರ್ ಇಂಡಿಯಾ ವಿಮಾನದಲ್ಲಿ ಮುಂಬೈಗೆ ತೆರಳುತ್ತಿದ್ದ. ಎಕ್ಸರೇ ಬ್ಯಾಗೇಜ್ ಇನ್ಸ್ ಪೆಕ್ಷನ್ ಸಿಸ್ಟಮ್ ಚೆಕ್ ಪಾಯಿಂಟ್ ನಲ್ಲಿ ಸಿಐಎಸ್ ಎಫ್ ಅಧಿಕಾರಿಗಳಿಗೆ ನನ್ನ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದಿದ್ದಾನೆ. ಕೆಲ ಕಾಲ ಏರ್ ಪೋರ್ಟ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ತಕ್ಷಣ ಆತನನ್ನು ಏರ್ ಪೋರ್ಟ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಗಳು ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳವನ್ನು ಕರೆಸಿ ಆತನ ಬ್ಯಾಗ್ ಪರಿಶೀಲಿಸಿ, ಹೆಚ್ಚಿನ ತನಿಖೆಗಾಗಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಕೊಚ್ಚಿನ್ ಏರ್ ಪೋರ್ಟ್ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular