ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಹಾಡುಗಳು ಯೂಟ್ಯೂಬ್ ನಲ್ಲಿ ಹೊಸ ದಾಖಲೆ ಬರೆದಿದ್ದು, ಸಂಗೀತ ಪ್ರಿಯರು ಫಿದಾ ಆಗಿದ್ದಾರೆ. ಇದೀಗ ‘ಕಾಡದೆಯೇ ಹೇಗಿರಲಿ’ ಎಂಬ ಮೆಲೋಡಿ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಶ್ರೀನಿವಾಸ ರಾಜು ನಿರ್ದೇಶನದ ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಮಾಳವಿಕಾ ನಾಯರ್ ಹಾಗೂ ಶರಣ್ಯ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದು, ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಅರ್ಜುನ್ ಜನ್ಯಾ ಸಂಗೀತ ಸಂಯೋಜನೆ ನೀಡಿದ್ದು, ಕೆಎಂ ಪ್ರಕಾಶ್ ಸಂಕಲನ, ವೆಂಕಟರಾಮ್ ಪ್ರಸಾದ್ ಛಾಯಾಗ್ರಹಣ, ಹಾಗೂ ಶೇಖರ್ ಮಾಸ್ಟರ್ ನೃತ್ಯ ನಿರ್ದೇಶನವಿದೆ.