HomeEntertainment'ಕೃಷ್ಣಂ ಪ್ರಣಯ ಸಖಿ' ಚಿತ್ರದ 'ಕಾಡದೆಯೇ ಹೇಗಿರಲಿ' ಹಾಡು ರಿಲೀಸ್

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ‘ಕಾಡದೆಯೇ ಹೇಗಿರಲಿ’ ಹಾಡು ರಿಲೀಸ್

ಶ್ರೀನಿವಾಸರಾಜು ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ‘ಕಾಡದೆಯೇ ಹೇಗಿರಲಿ’ ಎಂಬ ಮೆಲೋಡಿ ಹಾಡು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದೆ. ಈ ಹಾಡಿಗೆ ಪೃಥ್ವಿ ಭಟ್ ಧ್ವನಿಯಾಗಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಜಯಂತ್ ಕಾಯ್ಕಿಣಿ ಅವರ ಸಾಹಿತ್ಯವಿದೆ.

ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ಮಾಳವಿಕಾ ನಾಯರ್ ಮತ್ತು ಶರಣ್ಯ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದಾರೆ. ಶೇಖರ್ ಮಾಸ್ಟರ್ ಅವರ ನೃತ್ಯ ನಿರ್ದೇಶನವಿದ್ದು, ಕೆಎಂ ಪ್ರಕಾಶ್ ಸಂಕಲನ ಹಾಗೂ ವೆಂಕಟರಾಮಪ್ರಸಾದ್ ಛಾಯಾಗ್ರಹಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular