HomeKarnatakaಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಹಿನ್ನೆಲೆ; ಗೋಮೂತ್ರ ಸಿಂಪಡಿಸಿ ಸ್ವಚ್ಛಗೊಳಿಸಿದ ವಾಟಾಳ್ ನಾಗರಾಜ್

ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಹಿನ್ನೆಲೆ; ಗೋಮೂತ್ರ ಸಿಂಪಡಿಸಿ ಸ್ವಚ್ಛಗೊಳಿಸಿದ ವಾಟಾಳ್ ನಾಗರಾಜ್

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಮೈಸೂರನ್ನು ಶುದ್ಧಗೊಳಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗೋಮೂತ್ರ ಸಿಂಪಡಿಸಿ ಸ್ವಚ್ಛಗೊಳಿಸಿ ಗಮನಸೆಳೆದರು.

ಮೈಸೂರಿನ ಕೋಟೆ ಆಂಜನೇಯ ದೇವಾಲಯದ ಬಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸ್ವಚ್ಛತಾ ಚಳುವಳಿ ನಡೆಸಲಾಯಿತು.

ಈ ವೇಳೆ ಮಾತನಾಡಿದ ವಾಅಟಾಳ್ ನಾಗರಾಜ್, ಮೈಸೂರಿಗೆ ಕಳ್ಳರು, ಸುಳ್ಳರು, ಭ್ರಷ್ಟರ ಪಾಪದ ಧೂಳು ತಗುಲಿದೆ. ಪಾಪದ ಧೂಳು ತೊಲಗಲಿ ಎಂದು ಗೋಮೂತ್ರ ಸಿಂಫಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಅಪವಿತ್ರವಾದ ಮೈಸೂರು ಶುದ್ಧವಾಗಲಿ ಎಂದು ಸ್ವಚ್ಚತೆ ಮಾಡುತ್ತೀದ್ದೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular