HomeKarnatakaಗಮನಿಸಿ : ಆ. 22 ರಿಂದ ‘ಅಗ್ನಿಪಥ್’ ಸೇನಾ ನೇಮಕಾತಿ ರ್ಯಾಲಿ ಆರಂಭ

ಗಮನಿಸಿ : ಆ. 22 ರಿಂದ ‘ಅಗ್ನಿಪಥ್’ ಸೇನಾ ನೇಮಕಾತಿ ರ್ಯಾಲಿ ಆರಂಭ

2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯನ್ನು ಆಗಸ್ಟ್ 22 ರಿಂದ ಆಗಸ್ಟ್ 31 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ನಿರ್ದೇಶಕರು, ಮಂಗಳೂರು ಇವರು ಆಯೋಜಿಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳ ಇಮೇಲ್ ಮೂಲಕ ರವಾನಿಸಲಾಗಿದೆ.

ಈ ರ್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಮೀಸಲಾಗಿರುತ್ತದೆ ಎಂಬುದನ್ನು ನೇಮಕಾತಿ ನಿರ್ದೇಶಕರು, ಮಂಗಳೂರು ಇವರ ಕೋರಿಕೆಯ ಮೇರೆಗೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular