ಐಟಿಐ ಪಾಸಾದವರಿಗೆ ಗುಡ್ ನ್ಯೂಸ್: HAL ನಲ್ಲಿ ಅಪ್ರೆಂಟಿಸ್ ನೇಮಕಾತಿ

ಬೆಂಗಳೂರು: ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ ನಲ್ಲಿ ಐಟಿಐ ಪಾಸಾದವರಿಂದ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಫಿಟ್ಟರ್, ಟರ್ನರ್, ಕಂಪ್ಯೂಟರ್ ಆಪರೇಟರ್, ಇತರ ಟ್ರೇಡ್ ಗಳಲ್ಲಿ ಪಾಸಾದವರಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. 374 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಫಿಟ್ಟರ್ 138 ಹುದ್ದೆಗಳು ಸೇರಿ ಒಂದು ವರ್ಷದ ಐಟಿಐ ಟ್ರೇಡ್, 2 ವರ್ಷದ ಐಟಿಐ ಟ್ರೇಡ್ ಓದಿದವರಿಗೆ ವಿವಿಧ ಹುದ್ದೆಗಳು ಲಭ್ಯವಿವೆ.

ಕನಿಷ್ಠ 18 ವರ್ಷ ಗರಿಷ್ಠ 24 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ವರ್ಗವಾರು ವಯೋಮಿತಿ ಸಡಿಲಿಕೆ ಇರುತ್ತದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ ದಾಖಲಾತಿ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರಿಶೀಲಿಸಿ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ. ಅರ್ಜಿ ಸಲ್ಲಿಕೆ ಮತ್ತು ನೋಂದಣಿಗಾಗಿ https://www.apprenticeshipindia.gov.in/ ವೆಬ್ ಸೈಟ್ ಗಮನಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read