alex Certify BREAKING: ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ರೌಡಿಶೀಟರ್ ಕಾಲಿಗೆ ಗುಂಡೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ರೌಡಿಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ: ಬಂಧಿಸಲು ಹೋಗಿದ್ದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಮೇಲೆ ಗುಂಡು ಹಾರಿಸಲಾಗಿದೆ.

ಆತ್ಮ ರಕ್ಷಣೆಗಾಗಿ ರೌಡಿಶೀಟರ್ ಭವಿತ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ವಿನೋಬನಗರ ಪಿಎಸ್ಐ ಸುನಿಲ್ ಅವರು ಹಲವು ಕಳ್ಳತನ, ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಭವಿತ್ ಮೇಲೆ ಫೈರಿಂಗ್ ಮಾಡಿದ್ದಾರೆ. ಕಾನ್ಸ್ ಟೆಬಲ್ ಪ್ರಶಾಂತ್ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಭವಿತ್ ವಿರುದ್ಧ 7 ಪ್ರಕರಣ ದಾಖಲಾಗಿವೆ. ಈತನ ವಿರುದ್ಧ ಕೊಲೆ ಪ್ರಕರಣ, ದರೋಡೆ ಹಾಗೂ ಕೊಲೆ ಯತ್ನ ಪ್ರಕರಣಗಳಿವೆ. ನಿನ್ನೆ ರಾತ್ರಿ ಜಯನಗರ ಠಾಣೆ ಮಿತಿಯಲ್ಲಿ ಇಬ್ಬರು ಸ್ನೇಹಿತರ ಜೊತೆ ಸೇರಿ ಅಮಾಯಕ ಸಾರ್ವಜನಿಕರನ್ನು ತಡೆದು ಅವರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಸರಣಿ ಘಟನೆಯಲ್ಲಿ ಭಾಗಿಯಾಗಿದ್ದ.

ಇಂದು ಪಿಎಸ್ಐ ಸುನೀಲ್ ಆರೋಪಿಯ ಹುಡುಕಾಟ ನಡೆಸಿ ಬಂಧಿಸಲು ತೆರಳಿದ್ದಾಗ ಹಲ್ಲೆಗೆ ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದ್ದು, ಗಾಯಗೊಂಡ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...