HomeKarnataka'ನಮ್ಮ ಮೆಟ್ರೋ' ಪ್ರಯಾಣಿಕರ ಗಮನಕ್ಕೆ : ಇಂದಿನಿಂದ ಹಸಿರು ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಇಂದಿನಿಂದ ಹಸಿರು ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು : ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ದಿನಾಂಕ 13ರ ರಿಂದ 15ರ ಆಗಸ್ಟ್ 2024ರ ವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಗಸಂದ್ರದಿಂದ ಮಾದಾವರ (BIEC) ವರೆಗಿನ ರೀಚ್-3ರ ವಿಸ್ತ್ರತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಮಯದಲ್ಲಿ ವ್ಯತ್ಯಯ ವಾಗಲಿದ್ದು ಇದರ ವಿವರ ಈ ಕೆಳಕಂಡಂತಿವೆ.

1. ದಿನಾಂಕ 13ನೇ ಆಗಸ್ಟ್ 2024 ರಂದು – ಕೊನೆಯ ರೈಲು ಸೇವೆ ರಾತ್ರಿ 11.00 ಕ್ಕೆ ಬದಲಾಗಿ 10.00 ಗಂಟೆಯವರೆಗೆ.
2. ದಿನಾಂಕ 14ನೇ ಆಗಸ್ಟ್ 2024 ರಂದು-ಬೆಳಿಗ್ಗೆ 5.00 ಕ್ಕೆ ಬದಲಾಗಿ 06.00 ಕ್ಕೆ ಪ್ರಾರಂಭ ಮತ್ತು ಕೊನೆಯ ರೈಲು ಸೇವೆ ರಾತ್ರಿ 11.00 ಕ್ಕೆ ಬದಲಾಗಿ 10.00 ಗಂಟೆಯವರೆಗೆ.
3. ದಿನಾಂಕ 15ನೇ ಆಗಸ್ಟ್ 2024 ರಂದು- ಬೆಳಿಗ್ಗೆ, 5.00 ಕ್ಕೆ ಬದಲಾಗಿ 06.00 ಕ್ಕೆ ಪ್ರಾರಂಭ
ನಾಗಸಂದ್ರ ನಿಲ್ದಾಣದಿಂದ ದಿನಾಂಕ 13 ಮತ್ತು 14ನೇ ಆಗಸ್ಟ್ 2024 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಗಂಟೆಯ ಬದಲಾಗಿ 10.00 ಗಂಟೆಗೆ ಕೊನೆಗೊಳ್ಳುತ್ತದೆ. ದಿನಾಂಕ 14 ಮತ್ತು 15ನೇ ಆಗಸ್ಟ್ 2024 ರಂದು ನಾಗಸಂದ್ರದಿಂದ ಮೊದಲ ರ್ರೈಲು ಸೇವೆಯು ಬೆಳಿಗ್ಗೆ, 5.00 ಕ್ಕೆ ಬದಲಾಗಿ 06.00 ಕ್ಕೆ ಪ್ರಾರಂಭವಾಗುತ್ತದೆ.
ಆದಾಗ್ಯೂ ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ದಿನಾಂಕ 13 ಮತ್ತು 14ನೇ ಆಗಸ್ಟ್ 2024 ರಂದು ರಾತ್ರಿ 11.12 ಗಂಟೆಯವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ. ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆಯು ದಿನಾಂಕ 14 ಮತ್ತು 15ನೇ ಆಗಸ್ಟ್ 2024 ರಂದು ಬೆಳಿಗೆ 05.00 ಕ್ಕೆ ಪ್ರಾರಂಭವಾಗುತ್ತದೆ.ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್ ಸಿ ಎಲ್ ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular