HomeKarnatakaGOOD NEWS : ರಾಜ್ಯದ ಗ್ರಂಥಾಲಯದ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನಿಗದಿ ; ಸಿಎಂ ಸಿದ್ದರಾಮಯ್ಯ...

GOOD NEWS : ರಾಜ್ಯದ ಗ್ರಂಥಾಲಯದ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನಿಗದಿ ; ಸಿಎಂ ಸಿದ್ದರಾಮಯ್ಯ ಘೋಷಣೆ..!

ಬೆಂಗಳೂರು : ಗ್ರಂಥಾಲಯದ ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕನಿಷ್ಠ ವೇತನ ನಿಗದಿಪಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ನಮ್ಮ ಸರ್ಕಾರ ರಾಜ್ಯದ ಎಲ್ಲಾ 6,000ಕ್ಕೂ ಅಧಿಕ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ. ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಈ ಉದ್ದೇಶದಿಂದ ಗ್ರಾಮಗಳಲ್ಲಿ 6,599 ನೂತನ ಗ್ರಾಮಮಟ್ಟದ ಗ್ರಂಥಾಲಯಗಳನ್ಮು ಸ್ಥಾಪನೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಜ್ಞಾನ ವಿಕಾಸ ಕೇವಲ ಶಾಲಾ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಶಾಲೆಗಳ ಹೊರಗೂ ಕಲಿಕೆ ಅಗತ್ಯ. ಸಾವಿರಾರು ವರ್ಷಗಳ ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಸಮುದಾಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಿದೆ.ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ನೂರಕ್ಕೆ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ನಾವು ಶ್ರಮಿಸಬೇಕಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular