ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನ ಕ್ಯಾಂಟೀನ್ ಆಹಾರದಲ್ಲಿ ಹುಳು ಪತ್ತೆಯಾಗಿದ್ದು, ಸಿಬ್ಬಂದಿಗಳು ಆಕ್ರೋಶ ಹೊರ ಹಾಕಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್ ಪೋರ್ಟ್ ನಲ್ಲಿರುವ ಹೋಟೆಲ್ ನಲ್ಲಿ ಸಿಬ್ಬಂದಿಗಳಿಗೆ ನೀಡಲಾದ ಆಹಾರದಲ್ಲಿ ಹುಳು ಪತ್ತೆಯಾಗಿದ್ದು, ಕ್ಯಾಂಟೀನ್ ಆಹಾರದಲ್ಲಿ ಸ್ವಚ್ಚತೆ ಇಲ್ಲ. ಅಡುಗೆಯಲ್ಲಿ ಶುಚಿತ್ವ ಇಲ್ಲ ಎಂದು ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.