ನವದೆಹಲಿ : ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ CBI ಗೆ ವರ್ಗಾಯಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಕೋಲ್ಕತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಎಲ್ಲಾ ದಾಖಲೆಗಳನ್ನು ತಕ್ಷಣ ಸಿಬಿಐಗೆ ಹಸ್ತಾಂತರಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ.
ಆರೋಪಿ ಸಂಜಯ್ ರಾಯ್ ಅತ್ಯಾಚಾರ ಎಸಗಿದ ಕ್ರೂರಿಯಾಗಿದ್ದು, ಆಕೆಯ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿಕೊಲೆ ಮಾಡಿದ್ದನು.ಪರಿಣಾಮ ಆಕೆಯ ಎರಡೂ ಕಣ್ಣುಗಳಿಂದ ಮತ್ತು ಬಾಯಿಯಿಂದ ರಕ್ತಸ್ರಾವವಾಗಿದೆ. ಮುಖ ಹಾಗೂ ಉಗುರುಗಳಲ್ಲಿ ಗಾಯಗಳಾಗಿವೆ.
ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆ ಖಂಡಿಸಿ ಮತ್ತು ಅವರ ಕುಟುಂಬಕ್ಕೆ ನ್ಯಾಯ ಕೊಡಿಸುವಂತೆ ಹಾಗೂ ವೈದ್ಯಕೀಯ ವೃತ್ತಿಪರರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳದಾದ್ಯಂತ ಕಿರಿಯ ವೈದ್ಯರು ಮಂಗಳವಾರ ಮುಷ್ಕರ ನಡೆಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿ ಮೃತ ಮಹಿಳೆಯೊಂದಿಗೆ ಊಟ ಮಾಡಿದ ನಾಲ್ವರು ವೈದ್ಯರು ಸೇರಿದಂತೆ ಸುಮಾರು 25 ಜನರನ್ನು ಇಂದು ವಿಚಾರಣೆಗೆ ಕರೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.