HomeKarnatakaBREAKING: ಧರಣಿ, ಕರಾಳ ಸ್ವಾತಂತ್ರ್ಯ ದಿನಾಚರಣೆ ಹಿಂಪಡೆದ ಖಾಸಗಿ ಶಾಲೆಗಳು: ಸಚಿವ ಮಧು ಬಂಗಾರಪ್ಪ ಪ್ರಯತ್ನ...

BREAKING: ಧರಣಿ, ಕರಾಳ ಸ್ವಾತಂತ್ರ್ಯ ದಿನಾಚರಣೆ ಹಿಂಪಡೆದ ಖಾಸಗಿ ಶಾಲೆಗಳು: ಸಚಿವ ಮಧು ಬಂಗಾರಪ್ಪ ಪ್ರಯತ್ನ ಯಶಸ್ವಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಕೈಗೊಂಡಿದ್ದ ಖಾಸಗಿ ಶಾಲೆಗಳ ಮನವೊಲಿಸುವಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಯಶಸ್ವಿಯಾಗಿದ್ದಾರೆ.

ರುಪ್ಸಾ ಸಂಘಟನೆ, ಮತ್ತು ಕಾಮ್ಸ್ ಸಂಘಟನೆಗಳೊಂದಿಗೆ ಸಚಿವ ಮಧು ಬಂಗಾರಪ್ಪ ಪ್ರತ್ಯೇಕವಾಗಿ ಸಭೆ ನಡೆಸಿದ್ದಾರೆ. ಹೋರಾಟ ಕೈಬಿಡುವಂತೆ ಮನವೊಲಿಸಿದ್ದಾರೆ. ಒಂದು ಕಡೆ ಆಗಸ್ಟ್ 21ರ ನಂತರ ರುಪ್ಸಾ ಸಂಘಟನೆ ಪ್ರತಿಭಟನೆಗೆ ಮುಂದಾಗಿತ್ತು. ಮತ್ತೊಂದು ಕಡೆ ಕರಾಳ ಸ್ವಾತಂತ್ರ್ಯ ದಿನಾಚರಣೆಗೆ ಕಾಮ್ಸ್ ಮುಂದಾಗಿತ್ತು. ಎರಡೂ ಸಂಘಟನೆಗಳ ಪ್ರಮುಖರೊಂದಿಗೆ ಚರ್ಚಿಸಿ ಅವರ ಮನವೊಲಿಸುವಲ್ಲಿ ಮಧು ಬಂಗಾರಪ್ಪ ಮತ್ತು ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಹೀಗಾಗಿ ಧರಣಿ ಮತ್ತು ಕರಾಳ ಸ್ವಾತಂತ್ರ್ಯ ದಿನಾಚರಣೆಯನ್ನು ರುಪ್ಸಾ ಮತ್ತು ಕಾಮ್ಸ್ ಸಂಘಟನೆ ಹಿಂಪಡೆದುಕೊಂಡಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular