HomeIndiaಆಸ್ಪತ್ರೆಯಲ್ಲೇ ರೋಗಿಗಳ ಮೇಲೆ ವೈದ್ಯನಿಂದ ಲೈಂಗಿಕ ದೌರ್ಜನ್ಯ: ಸಂಬಂಧಿಕರಿಂದ ಥಳಿತಕ್ಕೊಳಗಾದ ಡಾಕ್ಟರ್ ಐಸಿಯುಗೆ ದಾಖಲು

ಆಸ್ಪತ್ರೆಯಲ್ಲೇ ರೋಗಿಗಳ ಮೇಲೆ ವೈದ್ಯನಿಂದ ಲೈಂಗಿಕ ದೌರ್ಜನ್ಯ: ಸಂಬಂಧಿಕರಿಂದ ಥಳಿತಕ್ಕೊಳಗಾದ ಡಾಕ್ಟರ್ ಐಸಿಯುಗೆ ದಾಖಲು

ಕಟಕ್: ಒಡಿಶಾದ ಕಟಕ್‌ ನ ಆಸ್ಪತ್ರೆಯೊಂದರಲ್ಲಿ ವೈದ್ಯನೊಬ್ಬ ಮಹಿಳಾ ರೋಗಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸಂಬಂಧಿಕರು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 11 ರಂದು ಒಡಿಶಾದ ಅತ್ಯಂತ ಪ್ರತಿಷ್ಠಿತ ಆರೋಗ್ಯ ಕೇಂದ್ರಗಳಲ್ಲಿ ಒಂದಾದ SCB ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿ ವೈದ್ಯ ಹೃದ್ರೋಗ ವಿಭಾಗದಲ್ಲಿ ಕೆಲಸ ಮಾಡುತ್ತಾರೆ.

ಪೊಲೀಸರ ಪ್ರಕಾರ, ರೋಗಿಗಳು ಎಲೆಕ್ಟ್ರೋಕಾರ್ಡಿಯೋಗ್ರಾಮ್ ಪರೀಕ್ಷೆಗೆ(ಇಸಿಜಿ) ಆಸ್ಪತ್ರೆಗೆ ಬಂದಿದ್ದ ವೇಳೆ  ವೈದ್ಯ ರೋಗಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಅವರ ಸಂಬಂಧಿಕರು ಆರೋಪಿಸಿದ್ದಾರೆ. ನಂತರ ಅವರು ವೈದ್ಯನನ್ನು ಥಳಿಸಿದ್ದಾರೆ. ವೈದ್ಯರನ್ನು ಅದೇ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ(ಐಸಿಯು) ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಲಬಾಗ್ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ ನಂತರ ವಿಷಯ ಬೆಳಕಿಗೆ ಬಂದಿದೆ. ಇಬ್ಬರು ರೋಗಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಅನಿಲ್ ಮಿಶ್ರಾ ತಿಳಿಸಿದ್ದಾರೆ.

ರೋಗಿಗಳು ಮತ್ತು ಆರೋಪಿ ಆಸ್ಪತ್ರೆಗೆ ದಾಖಲಾಗಿರುವುದರಿಂದ, ಅವರು ಚೇತರಿಸಿಕೊಂಡ ನಂತರ ಅವರ ಹೇಳಿಕೆಗಳನ್ನು ದಾಖಲಿಸಲಾಗುತ್ತದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular