HomeKarnatakaಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: ವಿದ್ಯಾಸಿರಿ, ಶುಲ್ಕ ಮರುಪಾವತಿ, ವಿದ್ಯಾರ್ಥಿವೇತನ ಸೌಲಭ್ಯ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: ವಿದ್ಯಾಸಿರಿ, ಶುಲ್ಕ ಮರುಪಾವತಿ, ವಿದ್ಯಾರ್ಥಿವೇತನ ಸೌಲಭ್ಯ

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ, ಪದವಿ ಮತ್ತು ಸಂಯೋಜಿತ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳು  https://ssp.postmatric.karnataka.gov.in ಮೂಲಕ ಆನ್‍ಲೈನ್  ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ವೆಬ್‍ಸೈಟ್‍ ನೋಡಬಹುದು. ಹಾಗೂ 8050770005, ಇ-ಮೇಲ್ ವಿಳಾಸ [email protected], 1902 ಸಂಖ್ಯೆಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular