HomeAgricultureರೈತರಿಗೆ ಗುಡ್ ನ್ಯೂಸ್ : 'ಕೃಷಿ ಭಾಗ್ಯ' ಯೋಜನೆಯಡಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಭಾಗ್ಯ’ ಯೋಜನೆಯಡಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕೃಷಿ ಇಲಾಖೆಯು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಟಾನಗೊಳ್ಳುತ್ತಿದ್ದು, ಬದು, ಕೃಷಿ ಹೊಂಡ, ಕೃಷಿಹೊಂಡದ ಸುತ್ತ ತಂತಿ ಬೇಲಿ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ, ಪಂಪ್ ಸೆಟ್ ಹಾಗೂ ಲಘು ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದೆ. ರೈತರು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕಾಗಿರುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90% ಸಹಾಯಧನ ನೀಡಲು ಅವಕಾಶವಿರುತ್ತದೆ.

ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಾಸ್ ಪೋರ್ಟ್ ಸೈಜ್ ಪೋಟೊ, ಪಹಣಿ, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಸಹಾಯಕ ಕೃಷಿ ನಿರ್ದೇಶಕ ರಮೇಶ್,ಎಸ್,ಟಿ.ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular