HomeKarnatakaಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಕೌನ್ಸೆಲಿಂಗ್ ಗೆ ಹಾಜರಾಗದೆ ಅದೇ ಕಾಲೇಜಲ್ಲಿ ಮುಂದುವರೆಯಲು ಅವಕಾಶ

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಕೌನ್ಸೆಲಿಂಗ್ ಗೆ ಹಾಜರಾಗದೆ ಅದೇ ಕಾಲೇಜಲ್ಲಿ ಮುಂದುವರೆಯಲು ಅವಕಾಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ಕೌನ್ಸೆಲಿಂಗ್ ಹಾಜರಾಗದೆ 2024 -25 ನೇ ಶೈಕ್ಷಣಿಕ ಸಾಲಿನಲ್ಲಿ ಅದೇ ಸ್ಥಳಗಳಲ್ಲಿ ಮುಂದುವರೆಯಲು ಉನ್ನತ ಶಿಕ್ಷಣ ಇಲಾಖೆಯಿಂದ ಅವಕಾಶ ನೀಡಲಾಗಿದೆ.

2023 -24ನೇ ಸಾಲಿನ ಅವಧಿ ಬಹುತೇಕ ಕಾಲೇಜುಗಳಲ್ಲಿ ಮುಕ್ತಾಯವಾಗಿದೆ. ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಮತ್ತೆ ಅವರು ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಕೆಲಸ ಮಾಡುತ್ತಿರುವ ಕಾಲೇಜುಗಳಲ್ಲಿ ಮುಂದುವರೆಯಲು ಬಯಸುವವರು ತಾವು ಸಲ್ಲಿಸುವ ಅರ್ಜಿಯಲ್ಲಿಯೇ ಹಾಲಿ ಕೆಲಸ ಮಾಡುತ್ತಿರುವ ಸ್ಥಳ ನಮೂದಿಸಿದರೆ ಸಾಕು, ಅಂತವರು ಕೌನ್ಸೆಲಿಂಗ್ ನಲ್ಲಿ ಭಾಗವಹಿಸುವ ಅಗತ್ಯವಿರುವುದಿಲ್ಲ.

ಅತಿಥಿ ಉಪನ್ಯಾಸಕರು ಕೆಲಸ ಮಾಡುವ ಕಾಲೇಜುಗಳಲ್ಲಿ ಕಾಯಂ ಅಧ್ಯಾಪಕರು ನೇಮಕವಾಗಿ ಅಥವಾ ವರ್ಗಾವಣೆಗೊಂಡು ಬಂದಾಗ ಬೋಧನೆ ಅವಧಿ ಕಡಿಮೆಯಾದಲ್ಲಿ ಅಂತಹ ಕಾಲೇಜುಗಳ ಅತಿಥಿ ಉಪನ್ಯಾಸಕರು ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿ ಬೋಧನಾ ಅವಧಿ ಇರುವ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular