ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯ ಪಡೆಯಲು ಆನ್ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿದೆ. (ಶೈಕ್ಷಣಿಕ ಸ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ)
*ಅರ್ಹತೆ:*
ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ, ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನ ರೂ.3.50 ಲಕ್ಷ. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷ ಮಿತಿಯಲ್ಲಿರಬೇಕು.
ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ಮೀಸಲಾತಿ ಇರಿಸಿದೆ.
*ಯೋಜನೆಗಳ ವಿವರ
ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ-ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.8 ಲಕ್ಷ ಮಿತಿಯಲ್ಲಿರಬೇಕು. ಯೋಜನೆಯಡಿ ಅರ್ಜಿಯನ್ನು www.kaushalkar.com ನಲ್ಲಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ, ಶ್ರೀಮತಿ, ಕುಮಾರಿ ಮುಂತಾದ ಮಾಹಿತಿ).
2023-24ನೇ ಸಾಲಿನಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಅರ್ಜಿಗಳನ್ನು ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ನಡಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕ್ಲಬ್ ರೋಡ್ನ ಶ್ರೀ ಕುಮಾರಸ್ವಾಮಿ ಗುಡಿ ಎದುರು ವೀರನಗೌಡ ಕಾಲೋನಿಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ) ದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ಕೇಂದ್ರ ಕಚೇರಿಯ ದೂ.080-22374848 ಮತ್ತು ಮೊ.7899899039 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———-