ಇಂದಿನಿಂದ ಮಹಾರಾಜ ಟಿ20 ಟ್ರೋಫಿ ಆರಂಭವಾಗಲಿದ್ದು, ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಕರ್ನಾಟಕದ ಯುವ ಪ್ರತಿಭೆಗಳಿಗೆ ಇದೊಂದು ಒಳ್ಳೆಯ ವೇದಿಕೆಯಾಗಿದ್ದು, ತಮ್ಮ ಪ್ರತಿಭೆಯನ್ನು ತೋರಿಸಲು ಸಜ್ಜಾಗಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂದಿನ ಮೊದಲ ಪಂದ್ಯದಲ್ಲಿ ಶುಭಂಗ್ ಹೆಗಡೆ ನಾಯಕತ್ವದ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ದೇವದತ್ ಪಡಿಕ್ಕಲ್ ನಾಯಕತ್ವದ ಗುಲ್ಬರ್ಗ ಮೈಸ್ಟಿಕ್ಸ್ ಮುಖಾಮುಖಿಯಾಗಲಿವೆ. ಕಳೆದ ಬಾರಿ 9 ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿಯೇ ಉಳಿದುಕೊಂಡಿದ್ದ, ಬೆಂಗಳೂರು ಬ್ಲಾಸ್ಟರ್ಸ್ ತಂಡ ಈ ಬಾರಿಯ ಮಹಾರಾಜ ಟ್ರೋಫಿಯಲ್ಲಿ ಕಮ್ ಬ್ಯಾಕ್ ಮಾಡಲಿದೆಯಾ ಕಾದು ನೋಡಬೇಕಾಗಿದೆ.
ಎರಡು ತಂಡಗಳಲ್ಲೂ ಬಲಿಷ್ಠ ಆಲ್-ರೌಂಡರ್ ಗಳಿದ್ದು, ಮನರಂಜನೆಯ ರಸದೌತಣ ಪಡೆದುಕೊಳ್ಳಲು ಕ್ರಿಕೆಟ್ ಪ್ರೇಮಿಗಳು ಸಜ್ಜಾಗಿದ್ದಾರೆ. ಇದಾದ ಬಳಿಕ ಮತ್ತೊಂದು ಪಂದ್ಯದಲ್ಲಿ ಶಿವಮೊಗ್ಗ ಲಯನ್ಸ್ ಮತ್ತು ಮೈಸೂರ್ ವಾರಿಯರ್ಸ್ ಸೆಣಸಾಡಲಿವೆ.