alex Certify ಮನೆಗೆ ನುಗ್ಗಿ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಗೆ ನುಗ್ಗಿ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು

ಕೋಲಾರ: ಮನೆಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುತ್ಯಾಲಪೇಟೆ ಬಡಾವಣೆಯಲ್ಲಿ ನಡೆದಿದೆ.

ದಿವ್ಯಶ್ರೀ (47) ಕೊಲೆಯಾದ ಶಿಕ್ಷಕಿ. ಮುತ್ಯಾಲಪೇಟೆ ಬಡಾವಣೆಯ ಮನೆಯಲ್ಲಿ ಶಿಕ್ಷಕಿ ದಿವ್ಯಶ್ರೀ ತನ್ನ ಮಗಳೊಂದಿಗೆ ವಾಸವಾಗಿದ್ದರು. ಈ ವೇಳೆ ಏಕಾಏಕಿ ಮನೆಗೆ ನುಗ್ಗಿದ ಮೂವರ ತಂಡ, ಶಿಕ್ಷಕಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾರೆ. ಬಳಿಕ ಆಕೆಯ ಮಗಳನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ. ಆದರೆ ಮಗಳು ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಓಡಿದ್ದಾಳೆ. ಸದ್ಯ ಮಗಳು ಬಚಾವ್ ಆಗಿದ್ದಾಳೆ. ಕೊಲೆ ಬಳಿಕ ಮೂವರು ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಮೃತ ಶಿಕ್ಷಕಿ ಉದ್ಯಮಿ ಪದ್ಮನಾಭ್ ಅವರ ಪತ್ನಿಯಾಗಿದ್ದು, ಮುಳಬಾಗಿಲು ತಾಲೂಕಿನ ಮುಡಿಯನೂರು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಘಟನಾ ಸ್ಥಳಕ್ಕೆ ಕೋಲಾರ ಎಸ್ ಪಿ ನಿಖಿಲ್ ಬಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...