alex Certify ಭಗವಂತನಿಗೆ ಮೋಸ ಮಾಡಿದ ಬಿಜೆಪಿ ಎಂಎಲ್ಎ: ಇವರು ದೇವರನ್ನೂ ಬಿಟ್ಟಿಲ್ಲ, ಇನ್ನು ಮನುಷ್ಯರು ಯಾವ ಲೆಕ್ಕ? ಶಾಸಕ ಸುನೀಲ್ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಗವಂತನಿಗೆ ಮೋಸ ಮಾಡಿದ ಬಿಜೆಪಿ ಎಂಎಲ್ಎ: ಇವರು ದೇವರನ್ನೂ ಬಿಟ್ಟಿಲ್ಲ, ಇನ್ನು ಮನುಷ್ಯರು ಯಾವ ಲೆಕ್ಕ? ಶಾಸಕ ಸುನೀಲ್ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

ಉಡುಪಿ: ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಉಡುಪಿ ಹಾಗೂ ದಕ್ಷಿಣ ಕನ್ನಡ ಎರಡೂ ಜಿಲ್ಲೆಯ ಜನರಿಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಕಳ ಥೀಮ್ ಪಾರ್ಕ್ ಪರಶುರಾಮ ಮೂರ್ತಿ ವಿಚರವಾಗಿ ಶಾಸಕ ಸುನಿಲ್ ಕುಮಾರ್ ವಿರುದ್ಧ ಗುಡುಗಿದ್ದಾರೆ. ಶಾಸಕರು ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ.‌ ದೇವರ- ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು, ಈಗ ಭಗವಂತನಿಗೆ ಮೋಸ ಮಾಡಿದ್ದಾರೆ. ಕಂಚಿನದ್ದೋ ಅಥವಾ ಫೈಬರಿನದ್ದೊ‌ ಎಂಬುದು ಜಗಜ್ಜಾಹಿರಾಗಿದೆ. ಈಗಲಾದರೂ ಉಡುಪಿ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು. ಇವರು ದೇವರನ್ನೇ ಬಿಡ್ಲಿಲ್ಲ. ಇನ್ನು ಮನುಷ್ಯರು ಯಾವ ಲೆಕ್ಕ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಆಡಳಿತದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಗೋಮಾಳದಲ್ಲಿ ಪರಶುರಾಮನ ಮೂರ್ತಿ ಸ್ಥಾಪನೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆ ಮೂರ್ತಿ ಕಾಮಗಾರಿ ಮುಂದುವರಿಸಬೇಕು ಎಂಬುದು ನಮ್ಮ ಆಶಯ. ಮೂರ್ತಿಯನ್ನು ಪೂರ್ಣಗೊಳಿಸುವುದು ನಮ್ಮ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ತಿಳಿಸಿದ್ದಾರೆ

ಇದೇ ವೇಳೆ ಬೈಂದೂರಿನಲ್ಲಿ ಕಾಂಗ್ರೆಸ್ – ಬಿಜೆಪಿ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಹಕ್ಕುಚ್ಯುತಿ ಎಂದರೇನು ಎಂದು ಎರಡು ಬಾರಿ ಶಾಸಕಿಯಾದ ನನಗೂ ಗೊತ್ತು. ಅಧಿಕಾರದ ಲಾಭ ದುರ್ಲಾಭದ ಬಗ್ಗೆ ನನಗೂ ಸಾಮಾನ್ಯ ಜ್ಞಾನ ಇದೆ. ಯಾರ ಹಕ್ಕನ್ನ ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.

ಅಧಿಕಾರಿಗಳ ಸಭೆ ಎಲ್ಲಿ ಕರೀಬೇಕು, ಅಲ್ಲಿಯೇ ಕರೆಯಬೇಕು, ಏನೂ ತೊಂದರೆ ಆಗಲ್ಲ. ತನ್ನ ಖಾಸಗಿ ಸ್ಥಳದಲ್ಲಿ ಅಧಿಕಾರಿಗಳನ್ನು ಸಭೆಗೆ ಕರೆದರೆ ತೊಂದರೆಯಾಗುತ್ತದೆ. ಸರ್ಕಾರಿ ಕಾರ್ಯಕ್ರಮಗಳು ಸರ್ಕಾರಿ ಕಚೇರಿಯಲ್ಲಿ ಆಗುವುದೇ ಒಂದು ಪ್ರೊಟೋಕಾಲ್ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...