alex Certify BREAKING NEWS: ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ದುರಂತ: ವಿದ್ಯುತ್ ಸ್ಪರ್ಶಿಸಿ ಇಂಜಿನಿಯರ್ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ದುರಂತ: ವಿದ್ಯುತ್ ಸ್ಪರ್ಶಿಸಿ ಇಂಜಿನಿಯರ್ ದುರ್ಮರಣ

ಬೆಂಗಳೂರು: ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಇಂಜಿನಿಯರ್ ಓರ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ.

ಕೌಶಿಕ್ (27) ಮೃತ ಇಂಜಿನಿಯರ್. ಜಿಗಣಿ ಕೈಗಾರಿಕಾ ಪ್ರದೇಶದಲ್ಲಿನ ಖಾಸಗಿ ಕಂಪನಿಯಲ್ಲಿ ಈ ದುರಂತ ಸಂಭವಿಸಿದೆ. ಪ್ಯಾನಲ್ ಬೋರ್ಡ್ ತಯಾರಿಸುವ ವೇಳೆ ಕೌಶಿಕ್ ಗೆ ಕರೆಂಟ್ ಶಾಕ್ ಹೊಡೆದಿದೆ. ಗಂಭೀರ ಸ್ಥಿತಿ ತಲುಪಿದ್ದ ಕೌಶಿಕ್ ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಕೌಶಿಕ್ ಸಾವನ್ನಪ್ಪಿದ್ದಾರೆ. ಕಂಪನಿಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳದ ಕಾರಣದಿಂದಲೇ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಜಿಗಣಿ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...