alex Certify ಗ್ಯಾರಂಟಿ ಯೋಜನೆ ಸ್ಥಗಿತ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾರಂಟಿ ಯೋಜನೆ ಸ್ಥಗಿತ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಸಿಹಿ ಸುದ್ದಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಕಡಿತವನ್ನೂ ಮಾಡುವುದಿಲ್ಲ. ಪಂಚ ಗ್ಯಾರಂಟಿ ಯೋಜನೆಗಳು ಯಥಾವತ್ತಾಗಿ ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಗ್ಯಾರಂಟಿ ಯೋಜನೆ ಪರಿಷ್ಕರಣೆ ಕುರಿತಾದ ಎಲ್ಲಾ ಗೊಂದಲಗಳಿಗೆ ಸಿಎಂ ತೆರೆ ಎಳೆದಿದ್ದಾರೆ.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ, ಕಳೆದ ಎರಡು ದಿನಗಳಿಂದ ಗ್ಯಾರಂಟಿ ಪರಿಷ್ಕರಣೆ ಕುರಿತಾದ ಚರ್ಚೆಗಳ ಬಗ್ಗೆ ತೆರೆಗೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನಮ್ಮ ಸರ್ಕಾರ ಆರ್ಥಿಕ ಭದ್ರತೆ ಒದಗಿಸಿದೆ. ಗ್ಯಾರಂಟಿ ಯೋಜನೆಗಳು ಆರ್ಥಿಕ ಅಸಮಾನತೆಯಿಂದ ಬಸವಳಿದ ಜನರಿಗೆ ನೆಮ್ಮದಿ ತಂದಿದ್ದು, ಈ ಯೋಜನೆಗಳನ್ನು ಪರಿಷ್ಕರಿಸುವ, ಬದಲಾಯಿಸುವ ಅಥವಾ ನಿಲ್ಲಿಸುವ ಯಾವ ಚಿಂತನೆಯೂ ಸರ್ಕಾರಕ್ಕೆ ಇಲ್ಲ. ಗ್ಯಾರಂಟಿ ಯೋಜನೆಗಳು ಯಥಾವತ್ತಾಗಿ ಮುಂದುವರೆಯಲಿವೆ ಎಂದು ಘೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...