alex Certify ಈ ಸರ್ಕಾರ ಹೋಗುವುದು ಗ್ಯಾರಂಟಿ: ಸಂಸದ ರಮೇಶ ಜಿಗಜಿಣಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಸರ್ಕಾರ ಹೋಗುವುದು ಗ್ಯಾರಂಟಿ: ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿ, ಬಿಡಲಿ, ಅದಕ್ಕೂ ನಮಗೂ ಸಂಬಂಧವಿಲ್ಲ. ಆದರೆ, ಈ ಸರ್ಕಾರ ಹೋಗುವುದು ಗ್ಯಾರಂಟಿ ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದ್ದಾರೆ.

ಗ್ಯಾರಂಟಿ ಯೋಜನೆ ಪರಿಷ್ಕರಣೆ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ಯೋಜನೆ ಸರ್ಕಾರಕ್ಕೆ ಸಂಬಂಧಿಸಿದ ವಿಷಯ. ಮುಂದೆ ಕಾಂಗ್ರೆಸ್ ಸರ್ಕಾರ ಏನಾಗುತ್ತದೆ ಎನ್ನುವುದು ನನಗೆ ಗೊತ್ತಿದೆ. ರಾಮಕೃಷ್ಣ ಹೆಗಡೆಯವರಿಗೆ ಮುಂದೇನಾಗುತ್ತದೆ ಎನ್ನುವುದು ಗೊತ್ತಾಗುತ್ತಿತ್ತು. ದೇವರ ದಯೆಯಿಂದ ನನಗೂ ಅವರ ಮಾದರಿಯಲ್ಲಿ ಮುಂದೇನಾಗುತ್ತದೆ ಎಂದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ. ನೋಡ್ತಾ ಇರಿ, ಎಲ್ಲವೂ ನಿಲ್ಲುತ್ತವೆ. ಈ ಸರ್ಕಾರ ಬಹಳ ದಿನ ನಡೆಯಲ್ಲ ಎಂದು ರಮೇಶ್ ಜಿಗಜಿಣಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...