HomeIndiaBREAKING NEWS: ಇಂದು ಮಧ್ಯಾಹ್ನ 3 ಗಂಟೆಗೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ:...

BREAKING NEWS: ಇಂದು ಮಧ್ಯಾಹ್ನ 3 ಗಂಟೆಗೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ: ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟ ಸಾಧ್ಯತೆ

ನವದೆಹಲಿ: ಇಂದು ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗುವುದು. ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ಕರೆಯಲಾಗಿದೆ.

ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗುವುದು.

370ನೇ ವಿಧಿ ರದ್ದು ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಜಮ್ಮ ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ಘೋಷಣೆ ಮಾಡಲಾಗುತ್ತಿದೆ. ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ 2024 ರ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳಿಗೆ ಇಂದೇ ಉಪಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular