ಬೆಂಗಳೂರು: 78ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಆಯೋಜಿಸಲಾಗಿದ್ದು, ಪುಷ್ಪ ಪ್ರದರ್ಶನ ನೋಡಲು ಜನಸಾಗರವೇ ಹರಿದುಬಂದಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧರಿಸಿ ಫ್ಲವರ್ ಶೋ ಆಯೋಜಿಸಲಾಗಿದ್ದು, 9ನೇ ದಿನಕ್ಕೆ ಕಾಲಿಟ್ಟಿದೆ. ಸಾಲು ಸಾಲು ರಜೆಗಳು ಇರುವ ಹಿನ್ನೆಲೆಯಲ್ಲಿ ಲಾಲ್ ಬಾಗ್ ಫ್ಲವರ್ ಶೋ ವೀಕ್ಷಣಗೆ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ.
ಈವರೆಗೆ ಬರೋಬ್ಬರಿ 1 ಕೋಟಿ 3 ಲಕ್ಷದ 76 ಸಾವಿರ ರೂಪಾಯಿ ಆದಾಯ ಸಂಗ್ರಹವಾಗಿದೆ. ಕೇವಲ 8 ದಿನಗಳಲ್ಲಿ ಸಸ್ಯಕಾಶಿಗೆ 3 ಲಕ್ಷ ಜನರು ಭೇಟಿ ನೀಡಿದ್ದಾರೆ. ನಿನ್ನೆ ಒಂದೇ ದಿನ ಸಂಜೆ 4 ಗಂಟೆ ವೇಳೆಗೆ 1 ಲಕ್ಷದ 15,000 ಜನರು ಭೇಟಿ ನೀಡಿದ್ದಾರೆ ಎಂದು ತೋಟಗಾರಿಕಾ ಇಲಾಖೆ ಮಾಹಿತಿ ನೀಡಿದೆ.
ಇನ್ನೂ ನಾಲ್ಕು ದಿನಗಳ ಕಾಲ ಆಗಸ್ಟ್ 19ರವರೆಗೆ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ನಡೆಯಲಿದ್ದು, ಸಾಲು ಸಾಲು ರಜೆಗಳು ಇರುವ ಹಿನ್ನೆಲೆಯಲ್ಲಿ ಇನ್ನಷ್ಟು ಜನರು ಭೇಟಿ ನೀಡುವ ನಿರೀಕ್ಷೆ ಇದೆ.